The Old Kannada Version 1831

Date: 1831, 1951
ISO: kan
Languages: Kannada
Script: Kannada
Bible ID: KANOKV
Copyright: Public Domain
Permissions: OPEN
 
Description: The Old Kannada Version 1831, originally translated by John Hands and William Reeve.
JHN 1
1 ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು. 2 ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು. 3 ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ. 4 ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು. 5 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ. 6 ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು. 7 ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು. 8 ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು. 9 ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು. 10 ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ. 11 ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ. 12 ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. 13 ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು. 14 ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
Virtual Storehouse
Digital Bible Society
The Digital Bible Library